ಕಸ ಸಂಗ್ರಹಿಸುವ ವಾಹನಗಳಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ರಾಜರಾಜೇಶ್ವರಿನಗರ: ‘ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಮತ್ತಷ್ಟು ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.
ಕೊಡಿಗೇಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಮನೆಮನೆಯಿಂದ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಭಾಗೀರಥಿ, ‘ಗ್ರಾಮ ಪಂಚಾಯಿತಿ ಮತ್ತು ಸ್ತ್ರೀ ಶಕ್ತಿ ಸಂಘಗಳ ಜೊತೆ ಒಡಂಬಡಿಕೆ ಮಾಡಿಕೊಂಡು, ನಾಲ್ಕು ಟ್ರ್ಯಾಕ್ಟರ್, ಐದು ಆಟೋ ಮೂಲಕ ಪ್ರತಿನಿತ್ಯ ಕಸ ಸಂಗ್ರಹಿಸಲಾಗುವದು’ ಎಂದರು.
ಇದೇ ವೇಳೆ ಹಸಿ ಮತ್ತು ಒಣಕಸ ಸಂಗ್ರಹಿಸಲು 2500 ಮನೆಗಳಿಗೆ ಉಚಿತ ಬಕೆಟ್‌ಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನೋದ ನರಸಿಂಹಮೂರ್ತಿ, ಉಪಾಧ್ಯಕ್ಷೆ ಭಾಗ್ಯವತಿ ಮುನಿಯಪ್ಪ, ಮಾಜಿ ಅಧ್ಯಕ್ಷರಾದ ಎನ್.ನಂಜುಂಡೇಶ್, ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೇವಣ್ಣಸಿದ್ದಯ್ಯ ಸದಸ್ಯರಾದ ನಾಗರಾಜು, ಚಂದ್ರು, ಸಾವಿತ್ರಿ, ಕೋಮಲ ಸೋಮಶೇಖರ್, ಗಂಗರಾಜಮ್ಮ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.