
ಬೆಂಗಳೂರು: ನಗರ ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್ ಆಗಿ ಮಂಗಳವಾರ ಕೆಲಸ ನಿರ್ವಹಿಸಿದರು.
ಸಾರ್ವಜನಿಕರು ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್ ಆಗಿ ಕೆಲಸ ಮಾಡಲು ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ ಅವರೊಂದಿಗೆ ಚರ್ಚಿಸಿ, ಪೊಲೀಸ್ ಆ್ಯಪ್ ಮೂಲಕ ಸುರೇಶ್ ಕುಮಾರ್ ಅವರು ಹೆಸರು ನೋಂದಣಿ ಮಾಡಿಕೊಂಡಿದ್ದರು.
ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದಲೇ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ರಾಜಾಜಿನಗರದ ಭಾಷ್ಯಂ ವೃತ್ತದಲ್ಲಿ ಮೂರು ಗಂಟೆಗಳ ಕಾಲ ಕಾರ್ಯ ನಿರ್ವಹಿಸಿದರು.
ಬಳಿಕ ಸುರೇಶ್ ಕುಮಾರ್ ಅವರು ಮಾತನಾಡಿ, ‘ಸಂಚಾರ ಪೊಲೀಸರು ಯಾವೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಏನೆಲ್ಲಾ ಸಮಸ್ಯೆಗಳಿವೆ ಎಂಬುದು ನನ್ನ ಅನುಭವಕ್ಕೆ ಬಂದಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.