ADVERTISEMENT

ಖಂಡ್ರೆಗೆ ಶುಭಾಶಯ ಹೇಳಿದ ಉಮೇಶ್ ಜಾಧವ್‌

​ಪ್ರಜಾವಾಣಿ ವಾರ್ತೆ
Published 15 ಜನವರಿ 2019, 19:41 IST
Last Updated 15 ಜನವರಿ 2019, 19:41 IST

ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿರುವ ಚಿಂಚೋಳಿಯ ಕಾಂಗ್ರೆಸ್‌ ಶಾಸಕ ಡಾ. ಉಮೇಶ್ ಜಾಧವ್‌ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಉಭಯ ಪಕ್ಷಗಳ ಮುಖಂಡರು ಹುಬ್ಬೇರುವಂತೆ ಮಾಡಿದರು.

ಜಾಧವ್‌ ಮೂರು ದಿನಗಳಿಂದ ಕಾಂಗ್ರೆಸ್‌ ನಾಯಕರ ಜತೆಗೆ ಸಂಪರ್ಕದಲ್ಲಿಲ್ಲ. ಅವರು ಮುಂಬೈ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಜತೆಗೆ ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT