ADVERTISEMENT

ಅಶ್ಲೀಲ ವಿಡಿಯೊ: ಪ್ರಾಧ್ಯಾಪಕನ ಮೊಬೈಲ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 21:26 IST
Last Updated 20 ಅಕ್ಟೋಬರ್ 2022, 21:26 IST

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಆರೋಪದಡಿ ಪ್ರಾಧ್ಯಾಪಕ ಮಧುಸೂದನ್ (45) ಎಂಬುವವರನ್ನು ವಶಕ್ಕೆ ಪಡೆದಿದ್ದ ಈಶಾನ್ಯ ವಿಭಾಗದ ಸೈಬರ್ ಪೊಲೀಸರು, ಮೊಬೈಲ್ ಜಪ್ತಿ ಮಾಡಿದ್ದಾರೆ.

‘ಯಲಹಂಕ ಬಳಿಯ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್, ಮೊಬೈಲ್‌ನಲ್ಲಿ ಹೆಚ್ಚು ಸಮಯ ಮಕ್ಕಳ ಅಶ್ಲೀಲ ವಿಡಿಯೊಗಳನ್ನು ನೋಡುತ್ತಿದ್ದರು. ಜತೆಗೆ, ಅದೇ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಮೊಬೈಲ್ ಮೂಲಕ ಅಪ್‌ಲೋಡ್ ಮಾಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT