ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಮೊಬೈಲ್ ಪೋನ್‌ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಹಾಲಕ್ಷ್ಮೀ ಲೇಔಟ್ ಪೊಲೀಸರು, ಬಂಧಿತರಿಂದ ವಿವಿಧ ಕಂಪನಿಗಳ 60 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಚಾಕಲಿ ಮನೋಹರ್ ಹಾಗೂ ಕೊಮ್ಮು ಪ್ರಶಾಂತ್ ಬಂಧಿತ ಆರೋಪಿಗಳು.
ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಠಾಣಾ ವ್ಯಾಪ್ತಿಯ ಸೋಫ್ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು.
‘ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಮೊಬೈಲ್‌ಗಳನ್ನು ಕಳವು ಮಾಡುತ್ತಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾಗಿದೆ. ಮೊಬೈಲ್ ಕಳೆದುಕೊಂಡರೆ ಕೆಲವರು ದೂರು ನೀಡುವುದಿಲ್ಲ. 59 ಮೊಬೈಲ್ ಫೋನ್ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕಳವು ಮಾಡಿದ ಮೊಬೈಲ್‌ಗಳನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಹೆಚ್ಚಿನ ಹಣ ಸಂಪಾದನೆ ಉದ್ದೇಶದಿಂದ ಕಳ್ಳತನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.