ಸಾಂದರ್ಭಿಕ ಚಿತ್ರ
ಬೆಂಗಳೂರು: ಜನರನ್ನು ಬೆದರಿಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಆರೋಪದಡಿ ಎಂಜಿನಿಯರಿಂಗ್ ಪದವೀಧರ ಸೇರಿ ಇಬ್ಬರನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.
‘ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಇತ್ತೀಚೆಗೆ ಸುಲಿಗೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ, ಎಂಜಿನಿಯರಿಂಗ್ ಪದವೀಧರ ಸೇರಿ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಇವರಿಂದ 68 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಹಿರಿಯೂರಿನಿಂದ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಮೊಬೈಲ್ ಸುಲಿಗೆ ಮಾಡಿಕೊಂಡು ತಮ್ಮೂರಿಗೆ ಹೋಗುತ್ತಿದ್ದರು. ಅಲ್ಲಿಯೇ ಕಡಿಮೆ ಬೆಲೆಗೆ ಮೊಬೈಲ್ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಹಣ ಖಾಲಿಯಾದ ನಂತರ ಪುನಃ ಬೆಂಗಳೂರಿಗೆ ಬರುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.