ADVERTISEMENT

ವಿಧಾನಸೌಧ ಎದುರೇ ಮೊಬೈಲ್ ಕಿತ್ತೊಯ್ದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 16:02 IST
Last Updated 17 ಏಪ್ರಿಲ್ 2022, 16:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿಧಾನಸೌಧ ಎದುರಿನ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೊರಟಿದ್ದ ಯುವಕರೊಬ್ಬರ ಮೊಬೈಲನ್ನು ದುಷ್ಕರ್ಮಿಗಳು ಕಿತ್ತೊಯ್ದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಾರ್ಚ್ 31ರಂದು ರಾತ್ರಿ ನಡೆದಿರುವ ಘಟನೆ ಸಂಬಂಧ 27 ವರ್ಷದ ಯುವಕ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ವಿಧಾನಸೌಧ ಠಾಣೆ ಪೊಲೀಸ್ ಮೂಲಗಳು ಹೇಳಿವೆ.

‘ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದಾರೆ. ರಾತ್ರಿ ಪಾಳಿ ಕೆಲಸಕ್ಕಾಗಿ ವಿಧಾನಸೌಧ ಪ್ರವೇಶ ದ್ವಾರ 4ರ ಪಾದಚಾರಿ ಮಾರ್ಗದ ಮೂಲಕ ನಡೆದುಕೊಂಡು ಹೊರಟಿದ್ದರು. ಪಾದಚಾರಿ ಮಾರ್ಗದಲ್ಲೇ ಬೈಕ್ ಚಲಾಯಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು, ಯುವಕನ ಕೈಯಲ್ಲಿದ್ದ ₹ 30 ಸಾವಿರ ಮೌಲ್ಯದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.