ADVERTISEMENT

ನಾಳೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 15:07 IST
Last Updated 3 ಡಿಸೆಂಬರ್ 2024, 15:07 IST
   

ಬೆಂಗಳೂರು: ‘ಫೆಂಜಲ್‌’ ಚಂಡಮಾರುತವು ಅರಬ್ಬಿ ಸಮುದ್ರದ ಮೇಲೆ ಪಶ್ಚಿಮ–ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ರಾಜ್ಯದ ಕೆಲವೆಡೆ ಮಾತ್ರ ಬುಧವಾರ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಲ್ಕು ದಿನ ಹೆಚ್ಚಿನ ಮಳೆಯಾಗಿತ್ತು. ಬುಧವಾರದಿಂದ ವಾತಾವರಣದಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ, ಕಲಬುರಗಿ, ಬೀದರ್, ಯಾದಗಿರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಿತ್ರದುರ್ಗ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಕರಾವಳಿ ಜಿಲ್ಲೆಗಳು ಹಾಗೂ ರಾಜ್ಯದ ಕೆಲವೆಡೆ ಇದೇ 8ರವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.