ADVERTISEMENT

ಲೈಂಗಿಕ ಕಿರುಕುಳ ನೀಡಿ ಅಪಹರಣ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 0:47 IST
Last Updated 28 ಮಾರ್ಚ್ 2020, 0:47 IST

ಬೆಂಗಳೂರು: ಪರಿಚಯಸ್ಥ ಯುವಕನೊಬ್ಬ ತನಗೆ ಲೈಂಗಿಕ ಕಿರಕುಳ ನೀಡುತ್ತಿದ್ದು, ಲೈಂಗಿಕವಾಗಿ ಸಹಕರಿಸದಿದ್ದರೆ ಅಪಹರಣ ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಯುವತಿಯೊಬ್ಬರು ಬಾಣಸವಾಡಿ ಠಾಣೆಗೆ ದೂರು ನೀಡಿದ್ದಾರೆ.

‘25 ವರ್ಷದ ಯುವತಿ ದೂರು ನೀಡಿದ್ದಾಳೆ. ಆರೋಪಿ ನಿಶಾಂತ್ ಪಾಂಡ್ಯ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ತನ್ನ ಎರಡು ಮೊಬೈಲ್ ಸಂಖ್ಯೆಯಿಂದ ನನಗೆ ಕರೆ ಹಾಗೂ ಸಂದೇಶ ಕಳುಹಿಸುತ್ತಿರುವ ಆರೋಪಿ ವಿಪರೀತ ತೊಂದರೆ ಕೊಡುತ್ತಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಹಿಂಸಿಸುತ್ತಿದ್ದಾನೆ’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ನಾನು ಆರೋಪಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಆತ ನನ್ನ ಸ್ನೇಹಿತರು ಹಾಗೂ ಕಂಪನಿ ಸಹೋದ್ಯೋಗಿಗಳ ಮುಂದೆ ಅಪಪ್ರಚಾರ ಮಾಡುತ್ತಿದ್ದಾನೆ. ಈ ಬಗ್ಗೆ ಆರೋಪಿಯನ್ನು ಪ್ರಶ್ನಿಸಿದ್ದಕ್ಕೆ, ನನ್ನನ್ನೇ ಅಪಹರಣ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ’ ಎಂದು ಎಂದೂ ದೂರಿನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.