ADVERTISEMENT

ಬೆಂಗಳೂರು: ಆಟೊದಲ್ಲಿ ಕುಳಿತಿದ್ದ ಯುವತಿಯ ಅಂಗಾಂಗ ಮುಟ್ಟಿ ದೌರ್ಜನ್ಯ, ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 23:30 IST
Last Updated 21 ಅಕ್ಟೋಬರ್ 2023, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಆಟೊದಲ್ಲಿ ಕುಳಿತಿದ್ದ ಯುವತಿಯೊಬ್ಬರ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬ್ರಿಗೇಡ್‌ ರಸ್ತೆಯಲ್ಲಿ ಅ. 16ರಂದು ತಡರಾತ್ರಿ ನಡೆದಿರುವ ಘಟನೆ ಬಗ್ಗೆ 28 ವರ್ಷದ ಯುವತಿ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ಹೇರ್ ಸಲೂನ್‌ವೊಂದರಲ್ಲಿ ವ್ಯವಸ್ಥಾಪಕರಾಗಿರುವ ಯುವತಿ, ಅ. 16ರಂದು ರಾತ್ರಿ ಬ್ರಿಗೇಡ್‌ ರಸ್ತೆಗೆ ಬಂದಿದ್ದರು. ತಡರಾತ್ರಿ ಮನೆಗೆ ವಾಪಸು ಹೋಗಲು ಆಟೊ ಹತ್ತಿ ಕುಳಿತಿದ್ದರು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ಇಬ್ಬರು ಆರೋಪಿಗಳು, ಯುವತಿಯ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗಿದ್ದಾರೆ.’

‘ಘಟನೆಯಿಂದ ಹೆದರಿದ್ದ ಯುವತಿ, ಸ್ನೇಹಿತರು ಹಾಗೂ ಪೋಷಕರಿಗೆ ವಿಷಯ ತಿಳಿಸಿದ್ದರು. ನಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ, ಘಟನಾ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.