ADVERTISEMENT

ಬೆಂಗಳೂರು: ಮಕ್ಕಳ ಶಿಕ್ಷಣಕ್ಕೆ ಸಾಲ ಮಾಡಿದ್ದ ಹಣ ಕಳ್ಳತನ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 17:31 IST
Last Updated 22 ಜೂನ್ 2025, 17:31 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಬೀಗ ಒಡೆದು ₹65 ಸಾವಿರ ನಗದು ಹಾಗೂ 5 ಗ್ರಾಂ ಚಿನ್ನವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ನಗರದ ಪ್ಯಾಲೆಸ್ ಆವರಣದಲ್ಲಿನ ಗಾರ್ಡನರ್‌ ಶ್ರೀನಿವಾಸ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಶೋಧ ಕಾರ್ಯ ಕೈಗೊಂಡಿದ್ದಾರೆ.

ಶ್ರೀನಿವಾಸ್‌ ಹಾಗೂ ಅವರ ಪತ್ನಿ ಶನಿವಾರ ಕೆಲಸಕ್ಕೆ ತೆರಳಿದ್ದರು. ಮಕ್ಕಳು ಕಾಲೇಜಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪರಿಚಿತ ವ್ಯಕ್ತಿಗಳು, ಮನೆಯ ಬಾಗಿಲು ಮುರಿದು, ಒಳನುಗ್ಗಿ ಬೀರುವಿನಲ್ಲಿಟ್ಟಿದ ನಗದು ಹಾಗೂ ಚಿನ್ನ ಕಳ್ಳತನ ಮಾಡಿದ್ದಾರೆ.

ADVERTISEMENT

‘ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕ ಪಾವತಿಸಲು ₹65 ಸಾವಿರ ಸಾಲ ಮಾಡಿದ್ದ ಹಣ ಕಳ್ಳತನವಾಗಿದೆ’ ಎಂದು ಶ್ರೀನಿವಾಸ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.