ADVERTISEMENT

ಹಣ ದ್ವಿಗುಣ ಆಮಿಷ; ₹ 7.30 ಲಕ್ಷ ಹೂಡಿಕೆ ವಂಚನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 21:02 IST
Last Updated 11 ಜುಲೈ 2021, 21:02 IST

ಬೆಂಗಳೂರು: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ₹ 7.30 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ದೇವನಹಳ್ಳಿಯ ಜಾಲ ಹೋಬಳಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಆರೋಪಿಗಳಾದ ಅಹ್ಮದ್ ಶಕೀರ್, ರಹೀಬ್ ಲಾಲ್ ಹಾಗೂ ಇರ್ಷಾದ್ ಮೊಹಮ್ಮದ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಖಾಸಗಿ ಕಂಪನಿಯಲ್ಲಿ ದೂರುದಾರ ಕೆಲಸ ಮಾಡುತ್ತಿದ್ದಾರೆ. ಅಲ್ಫಾ ಎಂಪೈರ್ ಇಂಟರ್‌ನ್ಯಾಷನಲ್ ಕಂಪನಿ ಪ್ರತಿನಿಧಿ ಸೋಗಿನಲ್ಲಿ ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ, ನಿಗದಿತ ಅವಧಿಯೊಳಗೆ ಹಣ ದ್ವಿಗುಣಗೊಳ್ಳುತ್ತದೆ’ ಎಂದಿದ್ದರು. ಅದನ್ನು ನಂಬಿದ್ದ ದೂರುದಾರ, ₹ 1.90 ಲಕ್ಷ ಹೂಡಿಕೆ ಮಾಡಿದ್ದರು.’

ADVERTISEMENT

‘ಮತ್ತಷ್ಟು ಮಂದಿಯಿಂದ ಹಣ ಹೂಡಿಕೆ ಮಾಡಿಸಿದರೆ ಲಾಭ ನೀಡುವುದಾಗಿ ಆರೋಪಿಗಳು ಹೇಳಿದ್ದರು. ಅದನ್ನೂ ನಂಬಿದ್ದ ದೂರುದಾರ, ಸ್ನೇಹಿತರ ಮೂಲಕ ₹ 5.40 ಲಕ್ಷ ಹೂಡಿಕೆ ಮಾಡಿಸಿದ್ದರು. ನಿಗದಿತ ದಿನದೊಳಗೆ ಕಂಪನಿಯಿಂದ ಯಾವುದೇ ಹಣ ವಾಪಸು ಬಂದಿಲ್ಲ. ಈ ಬಗ್ಗೆ ವಿಚಾರಿಸಿದಾಗ ಕಂಪನಿಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.