ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಐಶ್ವರ್ಯಾಗೌಡ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:26 IST
Last Updated 24 ಜೂನ್ 2025, 16:26 IST
ಐಶ್ವರ್ಯಾ ಗೌಡ
ಐಶ್ವರ್ಯಾ ಗೌಡ   

ಬೆಂಗಳೂರು: ಜಾರಿ ನಿರ್ದೇಶನಾಲಯ ಬೆಂಗಳೂರು ವಲಯವು ಐಶ್ವರ್ಯಾಗೌಡ ಮತ್ತು ಇತರೆ 17 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯ (ಪಿಎಂಎಲ್‌ಎ)ದಲ್ಲಿ ದೂರು ದಾಖಲಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅವರ ಸುಮಾರು ₹3.98 ಕೋಟಿ ಮೌಲ್ಯದ ಆಸ್ತಿಯನ್ನು ಎರಡು ದಿನದ ಹಿಂದೆಯಷ್ಟೇ ಇ.ಡಿ. ಮುಟ್ಟುಗೋಲು ಹಾಕಿಕೊಂಡಿತ್ತು.

ಐಶ್ವರ್ಯಾ ಮತ್ತು ಅವರ ಪತಿ ಕೆ.ಎನ್.ಹರೀಶ್ ವಿರುದ್ಧ ಬೆಂಗಳೂರು ನಗರ ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧರಿಸಿ ಇ.ಡಿ. ತನಿಖೆ ಕೈಗೊಂಡಿತ್ತು. ‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.