ADVERTISEMENT

ಡಿಕೆಶಿ ಜಾಮೀನಿಗೆ ವಿರೋಧ: ‘ಸುಪ್ರೀಂ’ ವಿಚಾರಣೆ ಇಂದು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 23:06 IST
Last Updated 14 ನವೆಂಬರ್ 2019, 23:06 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ನವದೆಹಲಿ: ಕಾಂಗ್ರೆಸ್‌ ಶಾಸಕ ಡಿ.ಕೆ. ಶಿವಕುಮಾರ್‌ ಅವರಿಗೆ ಜಾಮೀನು ಮಂಜೂರು ಮಾಡಿರುವ ದೆಹಲಿ ಹೈಕೋರ್ಟ್‌ನ ಆದೇಶದ ಸಿಂಧುತ್ವ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಶುಕ್ರವಾರ ನಡೆಯಲಿದೆ.

ಆರೋಪಿ ಶಿವಕುಮಾರ್‌ ಈ ಮೇಲ್ಮನವಿಯನ್ನು ವಿರೋಧಿಸಿ ಕೇವಿಯಟ್ ಸಲ್ಲಿಸಿದ್ದು, ನ್ಯಾಯಮೂರ್ತಿ ಆರ್‌.ಎಫ್‌. ನರಿಮನ್‌ ನೇತೃತ್ವದ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.

ಕಳೆದ ಸೆಪ್ಟೆಂಬರ್‌ 3ರಂದು ಬಂಧನಕ್ಕೆ ಒಳಗಾಗಿದ್ದ ಶಿವಕುಮಾರ್‌ ಅವರಿಗೆ ದೆಹಲಿ ಹೈಕೋರ್ಟ್‌ ಈಚೆಗೆ ಜಾಮೀನು ಮಂಜೂರು ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.