ADVERTISEMENT

ಬೆಂಗಳೂರಿನಲ್ಲಿ ಭಾರಿ ಮಳೆ: ಗುಡುಗು– ಸಿಡಿಲಿನ ಅಬ್ಬರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 20:16 IST
Last Updated 5 ಜೂನ್ 2022, 20:16 IST
ಬೆಂಗಳೂರಿನಲ್ಲಿ ಮಳೆ
ಬೆಂಗಳೂರಿನಲ್ಲಿ ಮಳೆ   

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ಬಿಡುವು ಕೊಡುತ್ತಲೇ ಮಳೆ ಸುರಿಯುತ್ತಿದ್ದು, ಭಾನುವಾರ ರಾತ್ರಿಯೂ ಹಲವೆಡೆ ಮಳೆ ಆಯಿತು.

ಭಾನುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಪ್ರದೇಶಗಳಲ್ಲಿಬಿಸಿಲು ಹೆಚ್ಚಿತ್ತು. ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಇತ್ತು. ಸಂಜೆ ತುಂತುರು ಮಳೆ ಆರಂಭವಾಗಿ, ನಂತರ ಜೋರಾಗಿಯಿತು. ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಶೇಷಾದ್ರಿಪುರ, ಆರ್‌.ಟಿ.ನಗರ, ಗಾಂಧಿನಗರ, ಮೆಜೆಸ್ಟಿಕ್, ಶಾಂತಿನಗರ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್, ಕೋರಮಂಗಲ, ಮಡಿವಾಳ, ಎಚ್‌ಎಸ್‌ಆರ್ ಲೇಔಟ್ ಹಾಗೂ ಸುತ್ತಮುತ್ತ ಮಳೆ ಆಯಿತು.

ಎಂ.ಜಿ. ರಸ್ತೆ, ಅಶೋಕನಗರ, ಶಿವಾಜಿನಗರ, ಹಲಸೂರು, ಇಂದಿರಾನಗರ, ಹೆಣ್ಣೂರು, ಬಾಣಸವಾಡಿ ಪ್ರದೇಶಗಳಲ್ಲೂ ಮಳೆ ಇತ್ತು.

ADVERTISEMENT

‘ನಗರದಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೆಲ ರಸ್ತೆಗಳಲ್ಲಿ ರಾತ್ರಿ ನೀರು ಧಾರಾಕಾರವಾಗಿ ಹರಿಯಿತು. ಸಿಬ್ಬಂದಿ ಸ್ಥಳಕ್ಕೆ ಹೋಗಿ ನೀರು ತೆರವು ಮಾಡಿದರು. ಉಳಿದಂತೆ, ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.