ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳಿಗೆ ₹1ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
2020-21ನೇ ಸಾಲಿನ ಬಜೆಟ್ ಘೋಷಣೆಯಂತೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ.
2019–20ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳು ಅರ್ಹರಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.