ADVERTISEMENT

ಬುಡಕಟ್ಟು ಸಮುದಾಯದ ಕಲ್ಯಾಣಕ್ಕೆ ಇನ್ನಷ್ಟು ಯೋಜನೆ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 3:56 IST
Last Updated 4 ಸೆಪ್ಟೆಂಬರ್ 2020, 3:56 IST

ಬೆಂಗಳೂರು: ‘ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಪುರಸ್ಕೃತ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಸಮುದಾಯದ ಏಳಿಗೆಗೆ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು’ ಎಂದು ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡಾ ಅವರಿಗೆ ಸಮಾಜ ಕಲ್ಯಾಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.

‘ಬುಡಕಟ್ಟು ಜನರಿರುವ ಕಡೆ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 10 ಸಂಚಾರಿಆರೋಗ್ಯ ಘಟಕ ಹಾಗೂಸರ್ಕಾರಿ ವೈದ್ಯಕೀಯ ಕಾಲೇಜುಗಳ ಸಮುದಾಯ ಆರೋಗ್ಯ ಕೋಶದಡಿ ಬುಡಕಟ್ಟು ಆರೋಗ್ಯ ಘಟಕ ಆರಂಭಿಸಲಾಗುವುದು.10 ವೈದ್ಯಕೀಯ ಕಾಲೇಜುಗಳ ಅಥವಾ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರ್ಮಶಾಲೆ ಆರಂಭಿಸಿ, ಆದಿವಾಸಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುವುದು’ ಎಂದರು.

‘19 ಪ್ರಧಾನ ಮಂತ್ರಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳಿಗೆ ತಲಾ ₹ 15 ಲಕ್ಷ ಬಿಡುಗಡೆ ಮಾಡಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.