ADVERTISEMENT

ಶೀಘ್ರದಲ್ಲೇ 52 ಸಾವಿರ ಮನೆಗಳು: ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 22:35 IST
Last Updated 22 ಜೂನ್ 2021, 22:35 IST
ವಸತಿ ಸಚಿವ ವಿ.ಸೋಮಣ್ಣ ಬಡವರಿಗೆ ದಿನಸಿ ಕಿಟ್ ವಿತರಿಸಿದರು. ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ, ಸ್ಥಳೀಯ ಮುಖಂಡರಾದ ವಿಶ್ವನಾಥ ಗೌಡ, ದಾಸೇಗೌಡ, ವಾಗೀಶ್, ಮೋಹನ್ ಕುಮಾರ್, ಉಮಾಶಂಕರ್ ಇದ್ದರು.
ವಸತಿ ಸಚಿವ ವಿ.ಸೋಮಣ್ಣ ಬಡವರಿಗೆ ದಿನಸಿ ಕಿಟ್ ವಿತರಿಸಿದರು. ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ, ಸ್ಥಳೀಯ ಮುಖಂಡರಾದ ವಿಶ್ವನಾಥ ಗೌಡ, ದಾಸೇಗೌಡ, ವಾಗೀಶ್, ಮೋಹನ್ ಕುಮಾರ್, ಉಮಾಶಂಕರ್ ಇದ್ದರು.   

ಬೆಂಗಳೂರು: ‘ಕರ್ನಾಟಕ ಗೃಹ ಮಂಡಳಿ ವತಿಯಿಂದ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ 52 ಸಾವಿರ ಮನೆಗಳ ನಿರ್ಮಾಣ ಕಾರ್ಯ ಐದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದುವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡಿನಲ್ಲಿ ಬಡವರು ಹಾಗೂ ಕಾರ್ಮಿಕರಿಗೆ ದಿನಸಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

‘ಸರ್ಕಾರ ಹಾಗೂ ಇನ್ನಿತರ ಸಂಸ್ಥೆಗಳಿಂದ 500 ಎಕರೆ ಭೂಮಿ ಪಡೆದು, ಬಡವರಿಗಾಗಿ ಪ್ರಧಾನಮಂತ್ರಿಗಳ ಆಶಯದಂತೆ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಗೋವಿಂದರಾಜ ನಗರ ಕ್ಷೇತ್ರದಲ್ಲಿರುವ ಬಡವರಿಗೆ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದ್ದು, ಇನ್ನೂ 20 ದಿನಗಳವರೆಗೆ ಕ್ಷೇತ್ರದಲ್ಲಿ ದಿನಸಿ ವಿತರಣೆ ನಡೆಯಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.