ADVERTISEMENT

ಮಗಳಿಗೆ ಮೂತ್ರಪಿಂಡ ದಾನ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 19:03 IST
Last Updated 21 ಫೆಬ್ರುವರಿ 2022, 19:03 IST

ಬೆಂಗಳೂರು: ಮೂತ್ರಪಿಂಡ ವೈಫಲ್ಯ ಸಮಸ್ಯೆ ಎದುರಿಸುತ್ತಿದ್ದ12 ವರ್ಷದ ಬಾಲಕಿಗೆ ತಾಯಿಯೇ ಮೂತ್ರಪಿಂಡ ದಾನ ಮಾಡಿದ್ದಾರೆ.

ಇಲ್ಲಿನ ಫೋರ್ಟಿಸ್ ಆಸ್ಪತ್ರೆ ವೈದ್ಯರು ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

‘ಒಂದು ವರ್ಷದಿಂದ ಬಾಲಕಿಯು ಮೂತ್ರಪಿಂಡ ವೈಫಲ್ಯ ಸಮಸ್ಯೆ ಎದುರಿಸುತ್ತಿದ್ದಳು. ಅವಳಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು.ತ್ವರಿತವಾಗಿ ಮೂತ್ರಪಿಂಡ ಕಸಿ ಮಾಡದಿದ್ದರೆ ಬಾಲಕಿ ಮೃತಪಡುವ ಸಾಧ್ಯತೆ ಹೆಚ್ಚಿತ್ತು. ಮೂತ್ರಪಿಂಡ ದಾನಿಗಳ ಕೊರತೆಯಿಂದ ಕಸಿ ತಡವಾಗುವ ಸಾಧ್ಯತೆಯಿತ್ತು. ತಾಯಿಯೇ ಮೂತ್ರಪಿಂಡ ದಾನ ಮಾಡಿದ್ದರಿಂದ ಸಮಯಕ್ಕೆ ಸರಿಯಾಗಿ ಕಸಿ ಮಾಡಲು ಸಾಧ್ಯವಾಯಿತು’ ಎಂದುಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕಸಿ ವಿಭಾಗದ ನಿರ್ದೇಶಕ ಡಾ. ಮೋಹನ್ ಕೇಶವ
ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.