ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ದುಪ್ಪಟ್ಟಾದಿಂದ ಮಲತಾಯಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ ಪುತ್ರನನ್ನು ಬೇಗೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗೀತಾ(45) ಕೊಲೆಯಾದ ಮಹಿಳೆ.
ಕೃತ್ಯ ಎಸಗಿದ ಆರೋಪದ ಅಡಿ ಚೇತನ್ (30) ಎಂಬಾತನನ್ನು ಬಂಧಿಸ ಲಾಗಿದೆ. ಠಾಣಾ ವ್ಯಾಪ್ತಿಯ ಗಾರ್ವೇಬಾವಿಪಾಳ್ಯದಲ್ಲಿ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಗೀತಾ, ಚೇತನ್ ಗಾರ್ವೇಬಾವಿಪಾಳ್ಯದ ಬಾಡಿಗೆ ಮನೆಯಲ್ಲಿ ನೆಲಸಿದ್ದರು. ಕೌಟುಂಬಿಕ ಕಲಹದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆಗೆ ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸ ಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.