ADVERTISEMENT

ಬಿಜೆಪಿಯ ಇಂಥ ಗೊಡ್ಡು ಬೆದರಿಕೆಗಳಿಗೆ ಕುಗ್ಗುವುದಿಲ್ಲ: ಸಂಸದ ಡಿ.ಕೆ. ಸುರೇಶ್‌

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 11:26 IST
Last Updated 5 ಅಕ್ಟೋಬರ್ 2020, 11:26 IST
ಸಂಸದ ಡಿ.ಕೆ. ಸುರೇಶ್
ಸಂಸದ ಡಿ.ಕೆ. ಸುರೇಶ್   

ಬೆಂಗಳೂರು: ‘ನಮ್ಮ ಮನೆಯ ಮೇಲೆ ಇಂದು ಮುಂಜಾನೆಯ ಸಿಬಿಐ ದಾಳಿ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಡೆಯಿಂದ ಬಂದ ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಟ್ವೀಟ್‌ ಮಾಡಿರುವ ಅವರು, ‘ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹೀಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ’ ಎಂದೂ ಪ್ರತಿಕ್ರಿಯಿಸಿದ್ದಾರೆ.

‘ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ’ ಎಂದೂ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.