ADVERTISEMENT

ಬೇಗೂರು ತಾಲ್ಲೂಕು ಕೇಂದ್ರಕ್ಕೆ ಒತ್ತಾಯ

ಸಂಸದ ಡಿ.ಕೆ. ಸುರೇಶ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 19:35 IST
Last Updated 16 ಡಿಸೆಂಬರ್ 2019, 19:35 IST
ಡಿ.ಕೆ.ಸುರೇಶ್ ಅವರು ಅಂಬೇಡ್ಕರ್ ಗ್ರಂಥಾಲಯ ಉದ್ಘಾಟಿಸಿ ವೀಕ್ಷಿಸಿದರು. ಶಾಸಕ ಎಂ.ಕೃಷ್ಣಪ್ಪ, ಪಾಲಿಕೆ ಸದಸ್ಯ ಎಂ.ಆಂಜನಪ್ಪ ಇದ್ದಾರೆ.
ಡಿ.ಕೆ.ಸುರೇಶ್ ಅವರು ಅಂಬೇಡ್ಕರ್ ಗ್ರಂಥಾಲಯ ಉದ್ಘಾಟಿಸಿ ವೀಕ್ಷಿಸಿದರು. ಶಾಸಕ ಎಂ.ಕೃಷ್ಣಪ್ಪ, ಪಾಲಿಕೆ ಸದಸ್ಯ ಎಂ.ಆಂಜನಪ್ಪ ಇದ್ದಾರೆ.   

ಬೊಮ್ಮನಹಳ್ಳಿ: ‘ನಗರದ ಹಳೆಯ ಗ್ರಾಮವಾದ ಬೇಗೂರನ್ನು ತಾಲ್ಲೂಕು ಕೇಂದ್ರ ಮಾಡಬೇಕು’ ಎಂದು ಸಂಸದ ಡಿ.ಕೆ. ಸುರೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

‌ಬೇಗೂರಿನಲ್ಲಿ ವಾರ್ಡ್ ಕಚೇರಿ ಹಾಗೂ ಅಂಬೇಡ್ಕರ್ ಗ್ರಂಥಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

‘ಬೇಗೂರು ಸುತ್ತಮುತ್ತಲ ಜನ ಪಹಣಿ ಪಡೆಯಬೇಕೆಂದರೂ ನಗರ ಕೇಂದ್ರದಲ್ಲಿರುವ ತಾಲ್ಲೂಕು ಕಚೇರಿಗೆ ಅಲೆಯಬೇಕಾಗಿದೆ. ಇದನ್ನು ತಪ್ಪಿಸಲು ಬೇಗೂರು ಮತ್ತು ಜಿಗಣಿ ಪ್ರದೇಶವನ್ನು ಒಳಗೊಂಡು ತಾಲ್ಲೂಕು ಕೇಂದ್ರದ ಅಗತ್ಯವಿದೆ ಎಂದರು.

ADVERTISEMENT

‘ಬೃಹದಾಕಾರವಾಗಿ ಬೆಳೆದಿರುವ ಬೆಂಗಳೂರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವವರೆಗೂ ಬಿಬಿಎಂಪಿ ಹೊಸ ವಸತಿ ಸಮುಚ್ಚಯಗಳಿಗೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬಾರದು’ ಎಂದರು.

₹2.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ವಾರ್ಡ್ ಕಚೇರಿ, ಗ್ರಂಥಾಲಯ ಕೇಂದ್ರ, ಸಾರ್ವಜನಿಕ ಶೌಚಾಲಯ ಹಾಗೂ ಸಮುದಾಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಯಿತು.

ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ, ‘ಬಿಬಿಎಂಪಿಯಿಂದ ಗ್ರಂಥಾಲಯ ಇಲಾಖೆಗೆ ತೆರಿಗೆ ಬಾಕಿ ಬರಬೇಕಿದೆ. ಈ ಹಣವನ್ನು ಬಿಡುಗಡೆ ಮಾಡಿದರೆ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳಾಗಿ ಪರಿರ್ವತಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.