ADVERTISEMENT

ಖಾಸಗಿ ಆಸ್ಪತ್ರೆಗಳ ಜತೆ ತೇಜಸ್ವಿ ಸೂರ್ಯ ಸಭೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 16:39 IST
Last Updated 18 ಏಪ್ರಿಲ್ 2021, 16:39 IST

ಬೆಂಗಳೂರು: ತಮ್ಮ ಕ್ಷೇತ್ರದ ವ್ಯಾಪ್ತಿಯ 40 ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜತೆ ಭಾನುವಾರ ಸಭೆ ನಡೆಸಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಿದ್ದಾರೆ.

ವರ್ಚ್ಯುವಲ್‌ ಮೂಲಕ ನಡೆಸಿದ ಸಭೆಯ ವಿವರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ತೇಜಸ್ವಿ, ‘ಸರ್ಕಾರದ ಆದೇಶದಂತೆ ಎಲ್ಲ ಆಸ್ಪತ್ರೆಗಳೂ ಶೇಕಡ 50ರಷ್ಟು ಹಾಸಿಗೆಗಳನ್ನು ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇಂತಹ ಕ್ಲಿಷ್ಟಕರ ಸನ್ನಿವೇಶದ ಲಾಭ ಪಡೆಯಲು ಯತ್ನಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT