ADVERTISEMENT

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 21:09 IST
Last Updated 27 ಏಪ್ರಿಲ್ 2024, 21:09 IST
ಶ್ರೀನಿವಾಸ್‌ ಪ್ರಸಾದ್‌
ಶ್ರೀನಿವಾಸ್‌ ಪ್ರಸಾದ್‌   

ಬೆಂಗಳೂರು: ಅನಾರೋಗ್ಯದ ಕಾರಣ ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. 

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರು, ಏ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ತಜ್ಞರ ತಂಡವು ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ. ವೈದ್ಯಕೀಯ ಆಮ್ಲಜನಕದ ಸಂಪರ್ಕದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯು ಘಟಕದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT