
ಪ್ರಜಾವಾಣಿ ವಾರ್ತೆ
ಬೆಂಗಳೂರು: ಎಂ.ಎಸ್.ರಾಮಯ್ಯನವರ ಜನ್ಮಶತಮಾನೋತ್ಸವದ ಪ್ರಯುಕ್ತ ಕರ್ನಾಟಕ ಅಂಚೆ ಇಲಾಖೆಯು ವಿಶೇಷ ಅಂಚೆ ಚೀಟಿ ಹಾಗೂ ಅಂಚೆ ಲಕೋಟೆ ಹೊರತಂದಿದ್ದು, ಅದರ ಬಿಡುಗಡೆ ಇದೇ 22ರಂದು ನಡೆಯಲಿದೆ.
‘ನಗರದ ಪ್ರಧಾನ ಅಂಚೆ ಕಚೇರಿಯ (ಜಿಪಿಒ) ಮೇಘದೂತ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್‌ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್ ಅವರು ಅಂಚೆ ಚೀಟಿ ಹಾಗೂ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ನಗರ ಪ್ರಧಾನ ಅಂಚೆ ಕಚೇರಿಯ ಪೋಸ್ಟ್‌ಮಾಸ್ಟರ್ ಜನರಲ್ ಎಲ್.ಕೆ.ದಾಸ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
‘ವಿಶೇಷ ಅಂಚೆ ಲಕೋಟೆಯು ನಗರದ ಪ್ರಧಾನ ಅಂಚೆ ಕಚೇರಿ, ಮಂಗಳೂರು, ಮೈಸೂರು, ಬೆಳಗಾವಿಯ ಕೇಂದ್ರ ಕಚೇರಿ ಹಾಗೂ ಇ–ಅಂಚೆ ಕಚೇರಿಯಲ್ಲಿ ಲಭ್ಯವಿರಲಿದೆ’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.