ADVERTISEMENT

ಅಭಿವೃದ್ಧಿಯಲ್ಲಿ ಸಂಶೋಧನೆ ಪಾತ್ರ ಮಹತ್ವದ್ದು:ಪ್ರೊ. ಸುರೇಶ್‌

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 20:17 IST
Last Updated 1 ಆಗಸ್ಟ್ 2019, 20:17 IST
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು   

ಬೆಂಗಳೂರು: ‘ಯಾವುದೇ ದೇಶ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಅನ್ವೇಷಣೆ ಮತ್ತು ಸಂಶೋಧನೆಗಳ ಪಾತ್ರ ಮಹತ್ವದ್ದಾಗಿರುತ್ತದೆ’ ಎಂದು ಇಸ್ರೊ ಬೆಂಗಳೂರು ವಿಭಾಗದ ಗೌರವ ಉಪನ್ಯಾಸಕ ಪ್ರೊ. ಬಿ.ಎನ್. ಸುರೇಶ್‌ ಅಭಿಪ್ರಾಯಪಟ್ಟರು.

ರಾಮಯ್ಯ ಆನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಪದವಿಪೂರ್ವ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಿಕ್ಷಣವು ಜೀವನದಲ್ಲಿ ಎದುರಾಗುವ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ. ಜ್ಞಾನ ಸಂಪಾ ದಿಸಿದರೆ ಸಾಲದು. ಸಮಾಜಕ್ಕೆ ಕೊಡು ಗೆಯನ್ನೂ ನೀಡಬೇಕು’ ಎಂದರು.

‘ಭಾರತ ಬಲಿಷ್ಠ ರಾಷ್ಟ್ರವಾಗಿ ಜಗತ್ತಿನಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು ಎಂದು ಡಾ. ಅಬ್ದುಲ್‌ ಕಲಾಂ ಹೇಳುತ್ತಿದ್ದರು. ಅದನ್ನು ಸಾಕಾರಗೊಳಿಸುವುದು ಇಂದಿನ ಯುವಸಮೂಹದ ಕೈಯಲ್ಲಿದೆ’ ಎಂದು ಅವರು ಹೇಳಿದರು.

ADVERTISEMENT

ರಾಮಯ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಶಿವಗುರು ಶ್ರೀಧರನ್‌, ಕುಲಸಚಿವರಾದ ಡಾ.ಕೆ. ಪುಷ್ಪಾ ಹಾಗೂ ಪ್ರೊ. ಗೋವಿಂದ ಕಡಂಬಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.