ADVERTISEMENT

ಜ.6ಕ್ಕೆ ಎಂಎಸ್‌ಎಂಇ. ನವೋದ್ಯಮ ಸಮಾವೇಶ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2023, 16:30 IST
Last Updated 22 ಡಿಸೆಂಬರ್ 2023, 16:30 IST
<div class="paragraphs"><p> ಕಿರು, ಸಣ್ಣ ಮತ್ತು ಮಧ್ಯಮ ಗಾತ್ರದ (ಎಂಎಸ್‌ಎಂಇ) ಉದ್ದಿಮೆಗಳು</p></div>

ಕಿರು, ಸಣ್ಣ ಮತ್ತು ಮಧ್ಯಮ ಗಾತ್ರದ (ಎಂಎಸ್‌ಎಂಇ) ಉದ್ದಿಮೆಗಳು

   

ಬೆಂಗಳೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ದಕ್ಷಿಣ ಪ್ರಾಂತೀಯ ಮಂಡಳಿಯು 2024ರ ಜ.6ರಂದು ಕೆ.ಜಿ. ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಲ್ಲಿ (ಎಫ್‌ಕೆಸಿಸಿಐ) ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ) ಮತ್ತು ನವೋದ್ಯಮ ಸಮಾವೇಶ ಹಮ್ಮಿಕೊಂಡಿದೆ. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಅಧ್ಯಕ್ಷ ಪನ್ನಾರಾಜ್ ಎಸ್., ‘ಭಾರತೀಯ ನವೋದ್ಯಮಗಳಿಗೆ ಜಾಗತಿಕ ಅವಕಾಶ, ಆಹಾರ ಸಂರಕ್ಷಣೆ ಮತ್ತು ಕೃಷಿ ಉದ್ಯಮಗಳಿಗೆ ಅವಕಾಶ ಸೇರಿ ವಿವಿಧ ವಿಷಯಗಳ ಬಗ್ಗೆ ತಜ್ಞರು ಉಪನ್ಯಾಸ ನೀಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಲೆಕ್ಕ ಪರಿಶೋಧಕರು, ಶಿಕ್ಷಣ ತಜ್ಞರು, ಉದ್ಯಮಿಗಳು, ವ್ಯಾಪಾರಿಗಳು ಸೇರಿ ವಿವಿಧ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯುವ ಅವಕಾಶವೂ ಇರಲಿದೆ. ಎಂಎಸ್‌ಎಂಇ ಮತ್ತು ನವೋದ್ಯಮದ 22 ವಲಯಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.