ADVERTISEMENT

ಮುದ್ರಾ ಸಾಲದ ಆಮಿಷ: ₹ 5.17 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 21:02 IST
Last Updated 11 ಜುಲೈ 2021, 21:02 IST

ಬೆಂಗಳೂರು: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಕೊಡಿಸುವ ಆಮಿಷವೊಡ್ಡಿ ನಗರದ ನಿವಾಸಿಯೊಬ್ಬರಿಂದ ₹ 5.17 ಲಕ್ಷ ಪಡೆದು ವಂಚಿಸಲಾಗಿದೆ.

ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಠಾಣೆ ವ್ಯಾಪ್ತಿಯ ವ್ಯಾಪಾರಿಯೊಬ್ಬರು ಸಾಲಕ್ಕಾಗಿ ಪ್ರಯತ್ನಿಸುತ್ತಿದ್ದರು. ಮುದ್ರಾ ಸಾಲ ವಿಭಾಗದಿಂದ ಮಾತನಾಡುತ್ತಿರುವುದಾಗಿ ಹೇಳಿ ಕರೆ ಮಾಡಿದ್ದ ಆರೋಪಿಗಳು, ದೂರುದಾರರಿಗೆ ಸಾಲ ಕೊಡಿಸುವ ಆಮಿಷವೊಡ್ಡಿದ್ದರು. ಅದನ್ನು ನಂಬಿದ್ದ ದೂರುದಾರ, ಆರೋಪಿಗಳು ಕೇಳಿದ್ದ ದಾಖಲೆಗಳನ್ನು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ಸಾಲ ಮಂಜೂರು ಮಾಡಲು ಕೆಲ ಶುಲ್ಕಗಳನ್ನು ಪಾವತಿಸಬೇಕೆಂದು ಹೇಳಿದ್ದ ಆರೋಪಿಗಳು, ದೂರುದಾರರಿಂದ ಹಂತ ಹಂತವಾಗಿ ₹ 5.17 ಲಕ್ಷ ಪಡೆದಿದ್ದರು. ಅದಾದ ನಂತರ ಯಾವುದೇ ಸಾಲ ಮಂಜೂರಾಗಿರಲಿಲ್ಲ. ಆರೋಪಿಗಳು ಸಹ ನಾಪತ್ತೆಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.