ADVERTISEMENT

ಕಪ್ಪು ತಲೆಯ ಮ್ಯೂನಿಯಾ ಪಕ್ಷಿಗಳ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 18:27 IST
Last Updated 10 ಮಾರ್ಚ್ 2022, 18:27 IST
   

ಬೆಂಗಳೂರು: ಕಪ್ಪು ತಲೆಯ ಮ್ಯೂನಿಯಾ ಪಕ್ಷಿಗಳನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ಪವನ್‌ (27) ಹಾಗೂ ಪ್ರಕಾಶ್‌ (22) ಬಂಧಿತರು. ಒಟ್ಟು 36 ಪಕ್ಷಿಗಳನ್ನು ಪಂಜರದಲ್ಲಿ ಇಟ್ಟುಕೊಂಡಿದ್ದ ಆರೋಪಿಗಳು ಭುವನೇಶ್ವರಿ ನಗರ ಬಸ್‌ ನಿಲ್ದಾಣದ ಬಳಿ ಅವುಗಳನ್ನು ಮಾರಲು ಮುಂದಾಗಿದ್ದರು. ಈ ವೇಳೆ ದಾಳಿ ನಡೆಸಲಾಗಿತ್ತು. ಎಲ್ಲ ಪಕ್ಷಿಗಳನ್ನು ರಕ್ಷಿಸಲಾಗಿದ್ದು, ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT