ಬೆಂಗಳೂರು: ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ (ಎಸ್‌ಟಿಆರ್‌ಆರ್) ಅಧ್ಯಕ್ಷರಾಗಿ ನೇಮಕಗೊಂಡಿರುವ ಸಿ.ಮುನಿರಾಜು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅವರು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಸದಸ್ಯ ಮರಿಸ್ವಾಮಿ ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿಯ 24, ಕಾಂಗ್ರೆಸ್‌ನ 21, ಜೆಡಿಎಸ್‌ನ 5 ಸದಸ್ಯರಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ನಾಲ್ವರು ಕಾಂಗ್ರೆಸ್ ಸದಸ್ಯರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.