ADVERTISEMENT

ಮುನಿರತ್ನ, ಸಿಬಿಐಗೆ ನೋಟಿಸ್‌

ಮತದಾರರ ಗುರುತಿನ ಚೀಟಿ ಅಕ್ರಮ ಸಂಗ್ರಹ: ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 21:05 IST
Last Updated 17 ಮಾರ್ಚ್ 2020, 21:05 IST
   

ಬೆಂಗಳೂರು: ‘ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ 20 ಸಾವಿರಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಶಾಸಕ (ಸದ್ಯಕ್ಕೆ ಅನರ್ಹ) ಎನ್‌.ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಮುನಿರತ್ನ ಅವರಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ನಗರದ ಎನ್‌.ಆನಂದ ಕುಮಾರ್ ಹಾಗೂ ಜಿ.ಸಂತೋಷ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಮತ್ತು ಜಾಲಹಳ್ಳಿ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.