ಬಿಬಿಎಂಪಿ
ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರ (ಕಂದಾಯ) ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಐಎಎಸ್ ಅಧಿಕಾರಿಗಳಾದ ವಿನೋತ್ ಪ್ರಿಯಾ. ಆರ್ ಅವರನ್ನು ಬಿಬಿಎಂಪಿ ವಲಯ ಆಯುಕ್ತ (ದಕ್ಷಿಣ) ಹುದ್ದೆಗೆ, ಸ್ನೇಹಲ್. ಆರ್ ಅವರನ್ನು ಬಿಬಿಎಂಪಿ ವಲಯ ಆಯುಕ್ತ(ಪೂರ್ವ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಶ್ರೀವಿದ್ಯಾ ಪಿ.ಐ ಅವರನ್ನು ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯನ್ನು ನಿರ್ವಹಿಸುತ್ತಿದ್ದ ರಾಗಪ್ರಿಯಾ. ಆರ್ ಅವರನ್ನು ಉದ್ಯೋಗ ಮತ್ತು ತರಬೇತಿ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜ್ಯೋತಿ.ಕೆ ಅವರನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.