ADVERTISEMENT

ಹಣದ ವಿಚಾರಕ್ಕೆ ಕೊಲೆಗೆ ಯತ್ನ: ಆರು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 16:27 IST
Last Updated 26 ಆಗಸ್ಟ್ 2024, 16:27 IST
<div class="paragraphs"><p>ಬಂಧನ( ಸಾಂಕೇತಿಕ ಚಿತ್ರ)</p></div>

ಬಂಧನ( ಸಾಂಕೇತಿಕ ಚಿತ್ರ)

   

ಬೆಂಗಳೂರು: ಹಣದ ವಿಚಾರಕ್ಕೆ ಸ್ನೇಹಿತರಿಬ್ಬರ ಮಧ್ಯೆ ನಡೆದ ಗಲಾಟೆಯಲ್ಲಿ ಶೋಯಬ್‌ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ ಆರೋಪದ ಮೇರೆಗೆ ಆರು ಮಂದಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಮೂವರು ತಲೆಮರೆಸಿಕೊಂಡಿದ್ದಾರೆ.

ಲಿಂಗರಾಜಪುರದ ನಿವಾಸಿಗಳಾದ ನಫೀಸ್‌, ನಿಸಾರ್‌ ಪಾಷ, ಮನ್ಸೂರ್‌, ಫಿರೋಜ್ ಪಾಷ, ಮೆಹಬೂಬ್‌, ರಜಾಕ್ ಎಂಬುವವರನ್ನು ಬಂಧಿಸಲಾಗಿದೆ.

ADVERTISEMENT

ದಾವೂದ್ ಮತ್ತು ಶೋಯೆಬ್‌ ಕಾಲೇಜು ಸಹಪಾಠಿಗಳು. ದಾವೂದ್ ಚಹಾ ಅಂಗಡಿ ಇಟ್ಟುಕೊಂಡಿದ್ದರು. ನಿರುದ್ಯೋಗಿಯಾಗಿದ್ದ ಶೋಯಬ್‌, ದಾವೂದ್‌ನಿಂದ ₹1.7 ಲಕ್ಷ ಹಣ ಪಡೆದಿದ್ದ. ಹಣ ವಾಪಸ್‌ ನೀಡುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ದಾವೂದ್, ಶೋಯಬ್‌ಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಆರು ಆರೋಪಿಗಳನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.