
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಅಪ್ಪನ ಮೇಲೆ ಹಲ್ಲೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಪುತ್ರ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾರಾಯಣಸ್ವಾಮಿ(55) ಕೊಲೆಯಾದವರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಯ್ ಎಂಬಾತನನ್ನು ಬಂಧಿಸಿದ್ದಾರೆ.
ಅಜಯ್ ತಂದೆ ಮುನಿವೆಂಕಟಪ್ಪ ಮತ್ತು ನಾರಾಯಣಸ್ವಾಮಿ ಅವರು ಮದ್ಯದ ಅಮಲಿನಲ್ಲಿ ನ.11ರಂದು ಗಲಾಟೆ ಮಾಡಿಕೊಂಡಿದ್ದರು. ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕೋಪಗೊಂಡಿದ್ದ ಅಜಯ್, ನಾರಾಯಣಸ್ವಾಮಿ ಅವರ ಮೇಲೆ ತೀವ್ರ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭಾನುವಾರ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.