ಕೊಲೆ ನಡೆದ ಸ್ಥಳ
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಗೆ 30ರಿಂದ 35 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.
ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹಾಕಿ ಕೊಲೆ ಮಾಡಿರುವಂತೆ ಕಂಡುಬರುತ್ತಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಬೇರೆ ಸ್ಥಳದಲ್ಲಿ ಕೊಲೆ ಮಾಡಿ ಖಾಲಿ ಪ್ರದೇಶದಲ್ಲಿ ಮೃತದೇಹ ಎಸೆದು ಹೋಗಲಾಗಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.