ಬೆಂಗಳೂರು: ಎಚ್‌ಎಎಲ್ ಠಾಣೆ ವ್ಯಾಪ್ತಿಯಲ್ಲಿ ಅರವಿಂದ್ (27) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
‘ಶನಿವಾರ ರಾತ್ರಿ ಈ ಕೊಲೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಕೃತ್ಯ ಎಸಗಿರುವ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದರು.
‘ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಅರವಿಂದ್, ಜೈಲಿಗೆ ಹೋಗಿದ್ದ. ಇತ್ತೀಚೆಗಷ್ಟೇ ಆತ ಜಾಮೀನು ಮೇಲೆ ಹೊರಬಂದಿದ್ದ. ಹಳೇ ವೈಷಮ್ಯದಿಂದಾಗಿ ಎದುರಾಳಿ ತಂಡದವರೇ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿರುವ ಅನುಮಾನ ಇದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ’ ಎಂದೂ ಅವರು ಹೇಳಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸಂಬಂಧಿಕರು ಹಾಗೂ ಸ್ನೇಹಿತರ ಹೇಳಿಕೆ ಪಡೆದಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.