ADVERTISEMENT

ಬೆಂಗಳೂರು: ಸಿಂಗಹಳ್ಳಿಯಲ್ಲಿ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 14:50 IST
Last Updated 19 ಡಿಸೆಂಬರ್ 2023, 14:50 IST
<div class="paragraphs"><p>ಕೊಲೆ</p></div>

ಕೊಲೆ

   

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಬಾಗಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಸಿಂಗಹಳ್ಳಿ ಗ್ರಾಮದ ಪಿಳ್ಳಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಮೃತದೇಹ ಎಸೆದು ಪರಾರಿ ಆಗಿದ್ದಾರೆ.

ಅಂದಾಜು 25ರಿಂದ 30 ವರ್ಷ ಒಳಗಿನ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಲೆಯಾದ ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಮೊಬೈಲ್‌ ಲೊಕೇಶನ್‌ ಆಧರಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಭಟ್ಟರ ಮಾರೇನಹಳ್ಳಿಯ ನವೀನ್‌ಕುಮಾರ್‌ ಎಂಬುವರು ದೂರು ನೀಡಿದ್ದಾರೆ. ಐಪಿಸಿ 302 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.