ಬೆಂಗಳೂರು: ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯ ಮಸೀದಿ ಬಳಿಯೇ ಅನ್ಸರ್ ಪಾಷ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.
‘ಗುರಪ್ಪನಪಾಳ್ಯ ನಿವಾಸಿ ಅನ್ಸರ್ ಪಾಷಾ, ಗುರುವಾರ ಸಂಜೆ ಮಸೀದಿಯಲ್ಲಿ ನಮಾಜ್ ಮುಗಿಸಿ ಹೊರಬಂದಿದ್ದರು. ಇದೇ ಸಂದರ್ಭದಲ್ಲಿ ಅವರ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ತೀವ್ರ ಗಾಯಗೊಂಡಿದ್ದ ಅನ್ಸರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದರು’ ಎಂದು ಪೊಲೀಸರು ಹೇಳಿದರು.
‘ಘಟನಾ ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಹಳೇ ದ್ವೇಷದಿಂದಾಗಿ ಈ ಕೊಲೆ ನಡೆದಿರುವ ಅನುಮಾನವಿದೆ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.