ADVERTISEMENT

ಬೆಂಗಳೂರು | ಮಹಿಳೆ ಕೊಲೆ: ಆಟೊದಲ್ಲಿ ಮೃತದೇಹವಿಟ್ಟು ಪರಾರಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 16:15 IST
Last Updated 25 ಅಕ್ಟೋಬರ್ 2025, 16:15 IST
   

ಬೆಂಗಳೂರು: ಮಹಿಳೆಯನ್ನು ಕೊಲೆ ಮಾಡಿ ಆಟೊದಲ್ಲಿ ಮೃತದೇಹವಿಟ್ಟು ಆರೋಪಿಗಳು ಪರಾರಿಯಾಗಿರುವ ಘಟನೆ ತಿಲಕ್‌ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಸಮೀಪದಲ್ಲೇ ನಿಂತಿದ್ದ ಆಟೊದಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಲ್ಮಾ (35) ಕೊಲೆಯಾದ ಮಹಿಳೆ. ಸಲ್ಮಾ ಅವರು ಪತಿಯಿಂದ ವಿಚ್ಛೇದನ ಪಡೆದುಕೊಂಡು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಸಲ್ಮಾ ಅವರಿಗೆ ನಾಲ್ವರು ಮಕ್ಕಳಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಗೊತ್ತಾಗಿಲ್ಲ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಆಟೊ ನಿಂತಿದ್ದ ಸುತ್ತಮುತ್ತಲ ರಸ್ತೆಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT