ತರಬೇತಿ ನಿರತ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಕೃತ್ಯ ಖಂಡಿಸಿ ಕೋಲ್ಕತ್ತದಲ್ಲಿ ಕಿರಿಯ ವೈದ್ಯರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು
–ಪಿಟಿಐ ಚಿತ್ರ
ಬೆಂಗಳೂರು: ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಭಾರತ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ.
‘ಪೊಲೀಸರ ಪ್ರಕಾರ ವಿದ್ಯಾರ್ಥಿನಿಯನ್ನು ಮೊದಲು ಕೊಲೆ ಮಾಡಿ ನಂತರ ಅತ್ಯಾಚಾರ ಮಾಡಲಾಗಿದೆ. ಈ ಪ‍್ರಕರಣ ಕುರಿತು ಸಮಗ್ರ ತನಿಖೆ ನಡೆಸಬೇಕು. ಮಹಿಳಾ ವೈದ್ಯರು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸಂಘದ ರಾಜ್ಯಶಾಖೆ ಅಧ್ಯಕ್ಷ ಡಾ.ಎಸ್ ಶ್ರೀನಿವಾಸ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ವಿದ್ಯಾರ್ಥಿನಿ ಕೊಲೆ ಖಂಡಿಸಿ ಮಂಗಳವಾರ ರಾಜ್ಯದಾದ್ಯಂತ ಮೋಂಬತ್ತಿ ಮೆರವಣಿಗೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.