ADVERTISEMENT

ರೌಡಿ ಭಟ್ಟಿ ಅಮ್ಜಾದ್ ಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 19:57 IST
Last Updated 29 ಫೆಬ್ರುವರಿ 2020, 19:57 IST
   

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಡಿಜೆ ಹಳ್ಳಿ ನಿವಾಸಿ, ರೌಡಿ ಅಮ್ಜಾದ್ ಅಲಿಯಾಸ್ ಭಟ್ಟಿ ಅಮ್ಜಾದ್ (40) ಎಂಬಾತನನ್ನು ಕೊಲೆ ಮಾಡಿರುವ ಘಟನೆ ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಶಾಂಪುರ ಗೇಟ್ ಮುಖ್ಯರಸ್ತೆಯಲ್ಲಿ ಅಮ್ಜಾದ್ ಹೋಗುತ್ತಿದ್ದ ವೇಳೆ ಎದುರಾಳಿ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಈ ಕುರಿತು ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ. ಕೊಲೆ ಮಾಡಿರುವ ದುಷ್ಕರ್ಮಿಗಳ ಮುಖಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಲ್ಕೈದು ಮಂದಿ ಸೇರಿ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.

ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.