ADVERTISEMENT

ಶಿವಮೂರ್ತಿ ಶರಣರ ಜಾಮೀನು ಅರ್ಜಿ: ಅ.26ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2023, 14:25 IST
Last Updated 29 ಸೆಪ್ಟೆಂಬರ್ 2023, 14:25 IST
ಮುರುಘಾ ಮಠದ ಶಿವಮೂರ್ತಿ ಶರಣ
ಮುರುಘಾ ಮಠದ ಶಿವಮೂರ್ತಿ ಶರಣ   

ಬೆಂಗಳೂರು: ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 26ಕ್ಕೆ ಮುಂದೂಡಿದೆ.

ಈ ಸಂಬಂಧ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಪೀಠದಲ್ಲಿನ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶರಣರ ಪರ ವಕೀಲರು, ಪ್ರಕರಣದಲ್ಲಿ ಹಿರಿಯ ವಕೀಲರು ಖುದ್ದು ಹಾಜರಾಗಿ ವಿಚಾರಣೆ ಮಂಡಿಸಲಿದ್ದು ಇದಕ್ಕಾಗಿ ಕಾಲಾವಕಾಶ ನೀಡುವಂತೆ ಕೋರಿದರು. ಅಂತೆಯೇ, ಸಂತ್ರಸ್ತ ಬಾಲಕಿಯರ ಪರವಾಗಿ ವಕೀಲ ಡಿ.ಸಿ.ಶ್ರೀನಿವಾಸ್‌ ವಕಾಲತ್ತು ಹಾಕುವುದಾಗಿ ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ದಸರಾ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿತು.

ADVERTISEMENT

ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು 2022ರ ಸೆಪ್ಟೆಂಬರ್ 1ರಂದು ಅವರನ್ನು ಬಂಧಿಸಿದ್ದು ಅಂದಿನಿಂದಲೂ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.