ADVERTISEMENT

ನಿರಾಣಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಜಿಪಿಗೆ ದೂರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 19:22 IST
Last Updated 22 ಜುಲೈ 2020, 19:22 IST

ಬೆಂಗಳೂರು: ‘ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ಆ್ಯಪ್‌ನಲ್ಲಿ ಹರಿಬಿಟ್ಟಿರುವ ಶಾಸಕ ಮುರುಗೇಶ ನಿರಾಣಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕಾಮಾಕ್ಷಿಪಾಳ್ಯದ ಹನುಮೇಗೌಡ ಎಂಬುವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

‘ಶಾಸಕ ನಿರಾಣಿ ಅವರು, ಹಿಂದೂ ಧರ್ಮದ ರಾಮ, ಕೃಷ್ಣ ಸೇರಿ ಮುಂತಾದ ದೇವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ’ ಎಂದೂ ಹನುಮೇಗೌಡ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT