ಬೆಂಗಳೂರು: ‘ಸಾಮಾಜಿಕ ಶಾಂತಿ ಮತ್ತು ಸೌಹಾರ್ದಕ್ಕೆ ಶಾಸ್ತ್ರೀಯ ಸಂಗೀತದ ಕೊಡುಗೆ ಅನನ್ಯ’ ಎಂದು ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದರು.
ಅನುಗ್ರಹ ಸಂಗೀತ ಮಹಾವಿದ್ಯಾಲಯ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ಯಾಗರಾಜರ ಮತ್ತು ಪುರಂದರದಾಸರ ಆರಾಧನಾ ಸಂಗೀತೋತ್ಸವದಲ್ಲಿ ಹರಿದಾಸರ ಪ್ರಚಲಿತ ದೇವರನಾಮಗಳ ಪುಸ್ತಕ ‘ಭಕ್ತಿ ಸನ್ನುತಿ-ಭಾಗ 2’ ಬಿಡುಗಡೆಗೊಳಿಸಿ, ಮಾತನಾಡಿದರು.
‘ಯಾವ ದೇಶದಲ್ಲಿ ಸಂಗೀತ ಮತ್ತು ಸಾಹಿತ್ಯಗಳು ಸಮೃದ್ಧವಾಗಿರುತ್ತವೆಯೋ ಅಲ್ಲಿ ಸುಭಿಕ್ಷೆ ನೆಲೆಸಿರುತ್ತದೆ. ಈ ರಂಗದ ವಿದ್ವಾಂಸರನ್ನು, ತಜ್ಞರನ್ನು ಗೌರವಿಸುವುದು ಹಾಗೂ ಆದರಿಸುವುದು ಶ್ರೇಷ್ಠ ಕಾರ್ಯ’ ಎಂದು ಹೇಳಿದರು.
ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಎಂ.ಆರ್.ವಿ. ಪ್ರಸಾದ್, ‘ಜ್ಞಾನಿಗಳನ್ನು ಸನ್ಮಾನಿಸಿದರೆ ಸಮಾಜದಲ್ಲಿ ಇನ್ನಷ್ಟು ಶ್ರೇಷ್ಠ ಕೆಲಸಗಳಿಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದರು.
ಆರಾಧನಾ ಮಹೋತ್ಸವದ ಅಂಗವಾಗಿ ಅನುಗ್ರಹ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹರಿದಾಸರ ದೇವರನಾಮ ಗೋಷ್ಠಿ, ಶಾಸ್ತ್ರೀಯ ಸಂಗೀತ ಗಾಯನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.