ADVERTISEMENT

ಎಂ.ವಿ ಸೀ.ಪ್ರಶಸ್ತಿಗೆ ಕಪ್ಪಣ್ಣ ಆಯ್ಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:34 IST
Last Updated 15 ಸೆಪ್ಟೆಂಬರ್ 2025, 4:34 IST
<div class="paragraphs"><p>ಶ್ರೀನಿವಾಸ್ ಜಿ.ಕಪ್ಪಣ್ಣ</p></div>

ಶ್ರೀನಿವಾಸ್ ಜಿ.ಕಪ್ಪಣ್ಣ

   

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2025ನೇ ಸಾಲಿನ ‘ಸಾವಿತ್ರಮ್ಮ– ಪ್ರೊ.ಎಂ.ವಿ.ಸೀ ಸಾಂಸ್ಕೃತಿಕ ಸಂಘಟಕ ಪ್ರಶಸ್ತಿ’ಗೆ ರಂಗಕರ್ಮಿ ಶ್ರೀನಿವಾಸ್ ಜಿ.ಕಪ್ಪಣ್ಣ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ₹30 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದ್ದು, ಸೆ.16ರಂದು ಸಂಜೆ 5 ಗಂಟೆಗೆ ಎನ್‌.ಆರ್. ಕಾಲೊನಿ
ಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದ ಎಂ.ವಿ.ಸೀ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವ್ ಸಿಂಘ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.