ಬೆಂಗಳೂರು: ಅ. 26ರಂದು ಮೈಸೂರು ಮ್ಯಾರಥಾನ್ ಆಯೋಜಿಸಲಾಗಿದ್ದು, ಅದರ ಲಾಂಛನ (ಲೋಗೊ), ಪೋಸ್ಟ್ ಕಾರ್ಡ್ ಅನ್ನು ನಗರದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.
ಎನ್‌ಇಬಿ ಸ್ಪೋರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಲಿಮಿಟೆಡ್, ಭಾರತೀಯ ಅಂಚೆ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೈಸೂರು ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್, ಹಾಫ್ ಮ್ಯಾರಥಾನ್, 10ಕೆ ಮತ್ತು 5ಕೆ ವಿಭಾಗಗಳಲ್ಲಿ ಓಟ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು. ಚಾಮುಂಡಿ ಬೆಟ್ಟದ ರಮಣೀಯ ಭೂಪ್ರದೇಶಗಳ ಮೂಲಕ ಓಟ ಸಾಗುವುದರಿಂದ ನೈಸರ್ಗಿಕ ಸೌಂದರ್ಯ ಮತ್ತು ದೈಹಿಕ ಸಹಿಷ್ಣುತೆಯ ಅಪರೂಪದ ಮಿಶ್ರಣವು ಓಟಗಾರರಿಗೆ ಸಿಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕೆ. ಪ್ರಕಾಶ್ ಮಾತನಾಡಿ, ‘ಅಕ್ಟೋಬರ್ 9ರಂದು ಆಚರಿಸಲಾಗುವ ವಿಶ್ವ ಅಂಚೆ ದಿನದ ಅಂಗವಾಗಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ’ ಎಂದು ವಿವರ ನೀಡಿದರು.
ಆಸಕ್ತರು ಮಾಹಿತಿಗೆ 70538 06493 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.