ADVERTISEMENT

ಮೈಸೂರು ರಸ್ತೆ–ಕೆಂಗೇರಿ ಮೆಟ್ರೊ ರೈಲು ಸಂಚಾರ ನಾಲ್ಕು ದಿನ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 12:48 IST
Last Updated 24 ಜನವರಿ 2023, 12:48 IST
ಮೆಟ್ರೊ ರೈಲು
ಮೆಟ್ರೊ ರೈಲು   

ಬೆಂಗಳೂರು: ಮೆಟ್ರೊ ರೈಲು ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆಯಿಂದ ಕೆಂಗೇರಿ ತನಕ ನಾಲ್ಕು ದಿನ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಕೆಂಗೇರಿಯಿಂದ ಚೆಲ್ಲಘಟ್ಟದ ತನಕದ ಮಾರ್ಗದ ವಿಸ್ತರಣೆಗೆ ಸಂಬಂಧಿಸಿದ ಕಾಮಗಾರಿಗಾಗಿ ಜ.27ರಿಂದ(ಶುಕ್ರವಾರ) ಜ.30ರ (ಸೋಮವಾರ) ತನಕ ಸಂಚಾರ ಸ್ಥಗಿತಗೊಳ್ಳಲಿದೆ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ತನಕ ರೈಲುಗಳ ಸೇವೆ ಲಭ್ಯವಿರಲಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ವೇಳಾಪಟ್ಟಿಯಂತೆ ರೈಲುಗಳು ಕಾರ್ಯಾಚರಣೆ ಮಾಡಲಿವೆ.

’ಜ.31ರ ಮಂಗಳವಾರ ಬೆಳಿಗ್ಗೆ 5 ಗಂಟೆಯಿಂದ ವೇಳಾಪಟ್ಟಿಯಂತೆ ರೈಲುಗಳ ಸಂಚಾರ ಪುನರ್ ಆರಂಭವಾಗಲಿದೆ. ಪ್ರಯಾಣಿಕರಿಗೆ ಆಗುವ ಅನಾನುಕೂಲಕ್ಕೆ ವಿಷಾದಿಸುತ್ತೇವೆ’ ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.