ADVERTISEMENT

ಮೈಸೂರು ವಿ.ವಿಗೆ ಕುಲಸಚಿವರ ನೇಮಕ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2019, 19:59 IST
Last Updated 20 ಫೆಬ್ರುವರಿ 2019, 19:59 IST

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಮತ್ತುಕುವೆಂಪು ವಿಶ್ವವಿದ್ಯಾಲಯದ ಕಡೂರು ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಕೆ.ಎಂ.ಮಹದೇವನ್‌ ಅವರನ್ನು ಕುಲಸಚಿವರನ್ನಾಗಿ (ಮೌಲ್ಯಮಾಪನ) ನೇಮಿಸಿ ಆದೇಶ ಹೊರಡಿಸಲಾಗಿದೆ.

ಹಾಲಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಆರ್‌.ರಾಜಣ್ಣ ಮತ್ತು ಪ್ರೊ.ಜೆ.ಸೋಮಶೇಖರ್‌ ಅವರನ್ನು ಮಾತೃ ವಿಭಾಗಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT