
ಬೆಂಗಳೂರು: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ 2026–27ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಒದಗಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನವನ್ನು ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗಿದೆ. ಈ ಅನ್ಯಾಯವನ್ನು ಸರಿಪಡಿಸಲು ಹೆಚ್ಚು ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.
‘ಡಾ.ಬಿ.ಆರ್. ಅಂಬೇಡ್ಕರ್ ನಿಗಮ, ಆದಿಜಾಂಬವ ನಿಗಮ, ಬಾಬು ಜಗಜೀವನ್‌ರಾಮ್ ನಿಗಮ ಸೇರಿದಂತೆ ನಮ್ಮ ಸಮುದಾಯದ ಎಲ್ಲ ನಿಗಮಗಳಿಗೆ ತಲಾ ₹3 ಸಾವಿರ ಕೋಟಿ ಅನುದಾನ ನೀಡಬೇಕು. ನಾಗಮೋಹನದಾಸ್ ವರದಿಯಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಪ್ರಮಾಣವನ್ನು ಹಂಚಿಕೆ ಮಾಡಿ, ಜಾರಿಗೊಳಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.