ADVERTISEMENT

ಎಸ್‌ಜೆಪಿ ಕ್ಯಾಂಪಸ್‌ಗೆ ನಾಲ್ವಡಿ ಹೆಸರು: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 21:08 IST
Last Updated 2 ನವೆಂಬರ್ 2022, 21:08 IST
ಡಿಪ್ಲೊಮಾ ಪದವೀಧರರ ಘಟಿಕೋತ್ಸವದಲ್ಲಿ ಪದಕ ಪಡೆದ ವಿದ್ಯಾರ್ಥಿಗಳ ಜೊತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಪಿ.ಪ್ರದೀಪ್‌ ಇದ್ದಾರೆ
ಡಿಪ್ಲೊಮಾ ಪದವೀಧರರ ಘಟಿಕೋತ್ಸವದಲ್ಲಿ ಪದಕ ಪಡೆದ ವಿದ್ಯಾರ್ಥಿಗಳ ಜೊತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಪಿ.ಪ್ರದೀಪ್‌ ಇದ್ದಾರೆ   

ಬೆಂಗಳೂರು: ‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ಏಳು ತಾಂತ್ರಿಕ ಶಿಕ್ಷಣ ಕಾಲೇಜುಗಳನ್ನು ಒಳಗೊಂಡಿರುವ ಬೆಂಗಳೂರಿನ ಎಸ್‌.ಜೆ. ಪಾಲಿಟೆಕ್ನಿಕ್‌ (ಎಸ್‌ಜೆಪಿ) ಕ್ಯಾಂಪಸ್‌ಗೆ ಅವರ ಹೆಸರು ಇಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ
ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಇದೇ ಮೊದಲ ಬಾರಿಗೆ ನಡೆದ ಡಿಪ್ಲೊಮಾ ಪದವೀಧರರ ಘಟಿಕೋತ್ಸ ವದಲ್ಲಿ ಮಾತನಾಡಿದ ಅವರು, ‘ತಾಂತ್ರಿಕ ಶಿಕ್ಷಣ ಆಯುಕ್ತಾಲಯವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಧ್ಯೇಯೋದ್ದೇಶ ಮತ್ತು ದೂರದೃಷ್ಟಿಗಳನ್ನು ಪ್ರತಿಬಿಂಬಿಸುವಂತೆ ರೂಪಿಸ ಲಾಗುವುದು’ ಎಂದರು.

‘ಈ ಕ್ಯಾಂಪಸ್ಸಿನಲ್ಲಿ ಎಸ್.ಜೆ. ಪಾಲಿಟೆಕ್ನಿಕ್, ಮಹಿಳೆಯರ ಸರ್ಕಾರಿ ಪಾಲಿಟೆಕ್ನಿಕ್, ಜಿಆರ್‌ಐಸಿ ಪಾಲಿಟೆಕ್ನಿಕ್, ಎಸ್.ಆರ್.ಸಿ.ಐ.ಬಿ.ಎಂ, ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆ, ಸರ್ಕಾರಿ ಜವಳಿ ತಂತ್ರಜ್ಞಾನ ಸಂಸ್ಥೆ ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ. ಅವೆಲ್ಲವೂ ನಾಲ್ವಡಿಯವರ ಕೊಡುಗೆ ಗಳಾಗಿವೆ’ ಎಂದು ವಿವರಿಸಿದರು.

ADVERTISEMENT

2022ರಲ್ಲಿ ಡಿಪ್ಲೊಮಾ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಲಾಯಿತು. ವಿವಿಧ ವಿಭಾಗಗಳ ರ್‍ಯಾಂಕ್ ವಿಜೇತರಿಗೆ ಚಿನ್ನ ಮತ್ತು ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.

ಸಚಿವರು ಮಾತನಾಡಿ, ‘ರಾಜ್ಯದ ಪಾಲಿಟೆಕ್ನಿಕ್‌ ಸಂಸ್ಥೆಗಳಲ್ಲಿ ಈಗ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಲ್ಲಿ ಶೇ 30ರಷ್ಟು ಬಾಲಕಿಯರಿ
ದ್ದಾರೆ. ಎನ್‌ಇಪಿಗೆ ಅನುಗುಣವಾಗಿ ತಾಂತ್ರಿಕ ಶಿಕ್ಷಣದಲ್ಲಿ ಶೇ 40ರಷ್ಟು ಬೋಧನೆ ಮತ್ತು ಶೇ 60ರಷ್ಟು ಪ್ರಾಯೋಗಿಕತೆಯನ್ನು ಅಳವಡಿಸಿ ಕೊಳ್ಳಲಾಗಿದ್ದು, ಇದರಿಂದ ಡಿಪ್ಲೊಮಾ ಪದವೀಧರರಿಗೆ ಕನಸಿನ ಉದ್ಯೋಗ ಗಳು ಸಿಗುತ್ತಿವೆ’ ಎಂದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌
ಮಾತನಾಡಿ, ‘ಡಿಪ್ಲೊಮಾ ವಿದ್ಯಾರ್ಥಿ ಗಳಿಗೆ ಇಂಗ್ಲಿಷ್‌ನಲ್ಲಿ ಬೋಧನೆ ನಡೆಯುತ್ತಿದ್ದರೂ ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದರಿಂದ ಗ್ರಾಮೀಣ ವಿದ್ಯಾರ್ಥಿ
ಗಳಿಗೆ ಅಪಾರ ಪ್ರಯೋಜನವಾಗಿದೆ. ಇನ್ನು ನಾಲ್ಕು ತಿಂಗಳಲ್ಲಿ ಡಿಪ್ಲೊಮಾದ ಎಲ್ಲ ತರಗತಿಗಳೂ ಸ್ಮಾರ್ಟ್‌ಕ್ಲಾಸ್‌ ರೂಮುಗಳಾಗಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.